ಸೊರಬ: ರಸ್ತೆ ಅಪಘಾತ - ಗಾಯಾಳುಗಳನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ ಸಚಿವ ಮಧು ಬಂಗಾರಪ್ಪ

ಸೊರಬ: ರಸ್ತೆ ಅಪಘಾತ - ಗಾಯಾಳುಗಳನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ ಸಚಿವ ಮಧು ಬಂಗಾರಪ್ಪ

ಸೊರಬ: ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ್‌ ಸವಾರರನ್ನು ಸಚಿವ ಮಧು ಬಂಗಾರಪ್ಪ ಅವರು ತಮ್ಮ ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ. 

ಸೋಮವಾರ (ಇಂದು) ಕುಬಟೂರಿನ ನಿವಾಸದಿಂದ ಹೊಸನಗರದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಸಚಿವರು ತೆರಳುತ್ತಿದ್ದರು. ಈ ವೇಳೆ ತಾಲೂಕಿನ ಕುಪ್ಪಗುಡ್ಡೆ ಗ್ರಾಮದ ಬಳಿ ಬೈಕ್‍ನಲ್ಲಿ ಹೊರಟಿದ್ದ ಪತಿ, ಪತ್ನಿ ಹಾಗೂ ಮಗು ಅಪಘಾತದಿಂದ ಗಾಯಗೊಂಡಿದ್ದನ್ನು ಗಮನಿಸಿದ ಅವರು ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ನೀರು ಕುಡಿಸಿ, ತಮ್ಮ ವಾಹನದಲ್ಲಿಯೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ, ಸ್ಥಳೀಯರಿಂದ ಮಾಹಿತಿ ಪಡೆದು ಅಪಘಾತ ಎಸಗಿದ ಕಾರನ್ನು ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದರು. ಜೊತೆಗೆ ತಮ್ಮ ಆಪ್ತ ಸಹಾಯಕರನ್ನು ಆಸ್ಪತ್ರೆಗೆ ಕಳುಹಿಸಿ, ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿ ನೀಡುವಂತೆ ತಿಳಿಸಿದರು