ಧಾರವಾಡ: ಜಿಲ್ಲಾಡಳಿತದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಧಾರವಾಡ: ಜಿಲ್ಲಾಡಳಿತದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಧಾರವಾಡ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಇಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. 

ಈ ವೇಳೆ ಸಚಿವ ಸಂತೋಷ ಲಾಡ್ ಹಾಗೂ ಗಣ್ಯರು, ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವರು, ವಾಲ್ಮೀಕಿ ಮಹರ್ಷಿಗಳ ಆದರ್ಶಗಳು ನಾಡಿಗೆ ಮಾದರಿಯಾಗಿವೆ. ಪ್ರಸ್ತುತ ದಿನಗಳಲ್ಲಿ ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.