ಮಾ. 6ರಂದು ಸಿದ್ಧರಾಮಯ್ಯ ರಾಜ್ಯ ಬಜೆಟ್ ಮಂಡನೆ - ಸಚಿವ ಸಂಪುಟದಲ್ಲಿ ನಿರ್ಧಾರ!

ಮಾ. 6ರಂದು ಸಿದ್ಧರಾಮಯ್ಯ ರಾಜ್ಯ ಬಜೆಟ್ ಮಂಡನೆ - ಸಚಿವ ಸಂಪುಟದಲ್ಲಿ ನಿರ್ಧಾರ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. 

ಈ ಕುರಿತು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸಲಿದ್ದು, ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.