ಬ್ರೇಕಿಂಗ್ : ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ...

ಬ್ರೇಕಿಂಗ್ : ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ...

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ಸೋನಿಯಾ ಗಾಂಧಿ ತೀರ್ಮಾನಿಸಿದ್ದಾರೆ. 

ಅಧ್ಯಕ್ಷ ಸ್ಥಾನ ತ್ಯಜಿಸಲು ತೀರ್ಮಾನಿಸಿದ್ದು, ತಕ್ಷಣವೇ ಹೊಸ ಅಧ್ಯಕ್ಷರನ್ನು ನೇಮಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸೋನಿಯಾ ಸೂಚಿಸಿದ್ದಾರೆ. 

ತಾವು ಹಂಗಾಮಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇವೆ, ಇನ್ಮುಂದೆ ಪಕ್ಷದ ಸಂವಿಧಾನ ಪ್ರಕಾರ, ಹೊಸ ಅಧ್ಯಕ್ಷರ ನೇಮಕವಾಗಬೇಕಾಗಿದೆ. 

ತಕ್ಷಣವೇ ಆಯ್ಕೆ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅತ್ಯುನ್ನತ ಸಮಿತಿಯಾಗಿದೆ. 

ನಾಳೆ ಈ ಸಮಿತಿ ಸಭೆ ನಿಗದಿಯಾಗಿದ್ದು, ಸೋನಿಯಾ ಸೂಚನೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.