ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ:ಅರ್ಜಿ ಸಲ್ಲಿಸಿದ ಕಪಿಲ್ ಸಿಬಲ್
ಬೆಂಗಳೂರು:ಹಿಜಾಬ್ ವಿಚಾರ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಕೀಲ ಕಪಿಲ್ ಸಿಬಲ್ ಈ ಕುರಿತು ಸಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ವಿಷಯ ವಿಶ್ವದಾದ್ಯಂತ ಹರಡುತ್ತಿದೆ. ಪರೀಕ್ಷಾ ಸಮಯ ಬೇರೆ.ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಬೇಕು ಎಂದು ವಕೀಲ ಕಪಿಲ್ ಸಿಬಲ್ ಅರ್ಜಿ ಮಂಡನೆ ವೇಳೆ ಮನವಿ ಮಾಡಿದ್ದಾರೆ. ಹೈಕೋರ್ಟ್ ನಲ್ಲಿ ಈಗಾಗಲೇ ವಿಚಾರಣೆ ನಡೆಯುತ್ತಿದೆ. ಮುಂದೆ ಏನು ಮಾಡಬೇಕೆಂದು ಪರಿಶೀಲನೆ ನಡೆಸುತ್ತೇವೆ ಎಂದು ನ್ಯಾಯಮೂರ್ತಿಗಳು ಕಪಿಲ್ ಸಿಬಲ್ ಅವರಿಗೆ ಹೇಳಿದ್ದಾರೆ. ಹೈಕೋರ್ಟ್ ಆದೇಶ ನೋಡಿ ವಿಚಾರಣೆ ನಡೆಸೋ ಸಾಧ್ಯತೆ ಇದೆ.