T20 WC: ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು - 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತ

ಬಾರ್ಬಡೋಸ್: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್‌ಗಳಿಂದ ಗೆದ್ದ ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಪಫಿಗೆ ಮುತ್ತಿಕ್ಕಿದೆ.
ಬಾರ್ಬಡೋಸ್‌ನಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡವು 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲು ಒಪ್ಪಿಕೊಂಡಿದೆ.
ದಕ್ಷಿಣ ಆಫ್ರಿಕಾ ಪರ ಹೆನ್ರಿಕ್ ಕ್ಲಾಸೆನ್ 52 ರನ್ (27 ಎಸೆತ, 2 ಬೌಂಡರಿ, 5 ಸಿಕ್ಸ್), ಕ್ವಿಂಟನ್ ಡಿ ಕಾಕ್ 39 ರನ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್ 31 ರನ್ ಗಳಿಸಿದರು.
ಇದಕ್ಕೂ ಮುನ್ನ ಭಾರತದ ಪರ ವಿರಾಟ್ ಕೊಹ್ಲಿ 76 ರನ್ (59 ಎಸೆತ, 6 ಬೌಂಡರಿ, 2 ಸಿಕ್ಸ್), ಅಕ್ಷರ್ ಪಟೇಲ್ 47 ರನ್ (31 ಎಸೆತ, 1 ಬೌಂಡರಿ, 4 ಸಿಕ್ಸ್) ಹಾಗೂ ಶಿವಂ ದುಬೆ 27 ರನ್ (16 ಎಸೆತ, 3 ಬೌಂಡರಿ, 1 ಸಿಕ್ಸ್) ಗಳಿಸಿದ್ದರು. ಇನ್ನು ದಕ್ಷಿಣ ಆಫ್ರಿಕಾ ಪರ ಕೇಶವ ಮಹಾರಾಜ್ ಹಾಗೂ ಅನ್ರಿಚ್ ನಾರ್ಟ್ಜೆ ತಲಾ 2 ವಿಕೆಟ್, ಮಾರ್ಕೊ ಜಾನ್ಸೆನ್ ಹಾಗೂ ಕಗಿಸೊ ರಬಾಡ ತಲಾ 1 ವಿಕೆಟ್ ಪಡೆದುಕೊಂಡಿದ್ದರು.