ಹುಬ್ಬಳ್ಳಿ: ಸಂಸ್ಥಾಪನಾ ದಿನಾಚರಣೆಗೆ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ ಸಚಿವರು
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾಗಿರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸಚಿವ ಸಂತೋಷ ಲಾಡ್ ಸಾರಿಗೆ ಬಸ್ಸಿನಲ್ಲಿಯೇ ಪ್ರಯಾಣ ಬೆಳೆಸುವ ಮೂಲಕ ಸಂಸ್ಥಾಪನಾ ದಿನಕ್ಕೆ ಮೆರಗನ್ನು ತಂದಿದ್ದಾರೆ.
ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಜರುಗಲಿದ್ದು, ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಿಂದ ಬಸ್ಸಿನಲ್ಲಿ ಹೊರಟು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸ್ಥಳ ಹುಬ್ಬಳ್ಳಿಯ ಗೋಕುಲ ರಸ್ತೆಯ ಬಿ ಆರ್ ಟಿ ಎಸ್ ಘಟಕಕ್ಕೆ ತೆರಳಿದರು.