ನಿನ್ನೆಗಿಂತ ಇಂದು ಹೆಚ್ಚಾದ ಕೊರೊನಾ: 348 ಮಂದಿಗೆ ಸೋಂಕು, 311 ಜನ ಡಿಸ್ಚಾರ್ಜ್

ನಿನ್ನೆಗಿಂತ ಇಂದು ಹೆಚ್ಚಾದ ಕೊರೊನಾ: 348 ಮಂದಿಗೆ ಸೋಂಕು, 311 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 348 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಇಂದು ಸಾವು ಸಂಭವಿಸಿಲ್ಲ. 

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,53,937 ಜನರಿಗೆ ಸೋಂಕು ತಗುಲಿದ್ದು, 40,066 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 311ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,11,351ಕ್ಕೆ ಏರಿಕೆಯಾಗಿದೆ. ಇನ್ನು 2,478 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 2.11% ನಷ್ಟಿದೆ. ಹಾಗೂ ಮರಣ ಪ್ರಮಾಣ 0.00ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 16,474 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.