ರಾಜ್ಯದಲ್ಲಿ ಇಂದು 676 ಜನರಿಗೆ ಕೊರೊನಾ: ಸೋಂಕಿನ ಪ್ರಮಾಣ 7.19%
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 676 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಇಂದು ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,62,775 ಜನರಿಗೆ ಸೋಂಕು ತಗುಲಿದ್ದು, 40,071 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 804ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,17,770ಕ್ಕೆ ಏರಿಕೆಯಾಗಿದೆ. ಇನ್ನು 4,892 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 7.19%ನಷ್ಟಿದೆ. ಹಾಗೂ ಮರಣ ಪ್ರಮಾಣ 0.00ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 9,400ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.