ಬ್ರೇಕಿಂಗ್: ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಹೊಸ ಮುಖಕ್ಕೆ ಆದ್ಯತೆ
ನವದೆಹಲಿ: ಕೇಂದ್ರ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ.
ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಸಿಂಗ್ ಅವರು, ಇಂದು ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಚಾರ ಮಾಡಲಿದ್ದಾರೆ. ಹೊಸ ತೆಲೆಮಾರಿನ ರಾಜಕಾರಣಿಗಳಿಗೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.