ಟೋಕಿಯೋ ಕಾಮನ್‌ವೆಲ್ತ್: ಚಿನ್ನ ಗೆದ್ದ ಕನ್ನಡಿಗ ಗುರುರಾಜ್‌ಗೆ ಸಿಎಂ ಅಭಿನಂದನೆ

ಬೆಂಗಳೂರು: ಟೋಕಿಯೋದಲ್ಲಿ ನಡೆಯುತ್ತಿರುವ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 61 ಕೆಜೆ ವಿಟ್ ಲಿಫ್ಟಿಂಗ್ ನಲ್ಲಿ ಕರ್ನಾಟಕದ ಪಿ.ಗುರುರಾಜ ಅವರು ಕಂಚಿನ ಪದಕ ಗೆದ್ದಿದ್ದರು. ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಾಮನ್‌ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆಯನ್ನು ಎತ್ತರಕ್ಕೇರಿಸಿದ ಪಿ.ಗುರುರಾಜ ಅವರಿಗೆ ಹಾರ್ದಿಕ ಅಭಿನಂದನೆಗಳು. ಅವರು ಕರ್ನಾಟಕದ ಕುಂದಾಪುರದವರು ಎನ್ನುವುದು ನಾಡಿಗೆ ಹೆಮ್ಮೆಯ ಸಂಗತಿ. ಅವರಿಗೆ ಉಜ್ವಲ ಯಶಸ್ಸು ಪ್ರಾಪ್ತವಾಗಲಿ ಎಂದು ಸಿಎಂ ಹಾರೈಸಿದ್ದಾರೆ.