ಬೆಂಗಳೂರು : ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರದಿಂದ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಅದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಪರ್ವವನ್ನು ಮುಂದುವರೆಸಿದೆ. ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೆಎಸ್‌ಆರ್‌ಪಿ ಎಡಿಜಿಪಿ ಉಮೇಶ್ ಕುಮಾರ್, ಬಿಎಂಟಿಎಫ್ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ CTC ಹರಿಶೇಖರನ್ ಹಾಗೂ ಡಿಐಜಿ ಬೆಳಗಾವಿ ಕಮಿಷನರ್ ಎಡ ಮಾರ್ಟೀನ್ ಮಾರ್ಬನಿಂಗ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.