ಬ್ರೇಕಿಂಗ್ : ನಾನು ಬಿಜೆಪಿ ಬಿಡುವ ಮಾತೇ ಇಲ್ಲ : ಸಚಿವ ವಿ.ಸೋಮಣ್ಣ

ಬ್ರೇಕಿಂಗ್ : ನಾನು ಬಿಜೆಪಿ ಬಿಡುವ ಮಾತೇ ಇಲ್ಲ : ಸಚಿವ ವಿ.ಸೋಮಣ್ಣ

ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಭಾರೀ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಸೋಮಣ್ಣ ತಾವು ಬಿಜೆಪಿ ಬಿಡುವ ಮಾತೇ ಇಲ್ಲ ಎಂದಿದ್ದಾರೆ. 

ಈ ಮೂಲಕ ಸೋಮಣ್ಣ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಚರ್ಚೆಗೆ ತೆರೆಬಿದ್ದಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದಿದ್ದಾರೆ. ಮಾತ್ರವಲ್ಲದೆ ಕಾಂಗ್ರೆಸ್ ಸೇರ್ಪಡೆ ಕುರಿತು ಡಿಕೆಶಿ ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿ ಬಿಡುತ್ತೇನೆ ಎನ್ನುವುದು ಕೇವಲ ವದಂತಿ. 

ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇನೆ. ಇದೇ ಕಾಯಕವನ್ನು ಮುಂದುವರೆಸುತ್ತೇನೆ ಎಂದಿದ್ದಾರೆ.