ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಆಟಗಾರ ವಿರಾಟ್ ಕೊಹ್ಲಿ

ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಆಟಗಾರ ವಿರಾಟ್ ಕೊಹ್ಲಿ

ಭಾರತ ಮತ್ತು ಆರ್‌ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಭಾನುವಾರ ಆರ್‌ಸಿಬಿ ವಿರುದ್ಧದ ಐಪಿಎಲ್ 2025 ಪಂದ್ಯದಲ್ಲಿ ಕೊಹ್ಲಿ ತಮ್ಮ 100ನೇ ಅರ್ಧಶತಕವನ್ನು ಗಳಿಸಿದರು. ಆರ್‌ಸಿಬಿ 17.3 ಓವರ್‌ಗಳಲ್ಲಿ 174 ರನ್‌ಗಳ ಗುರಿಯನ್ನು ಬೆನ್ನಟ್ಟಿದಾಗ ವಿರಾಟ್‌ ಕೊಹ್ಲಿ ಅವರು 62* ರನ್ (45 ಎಸೆತ) ಗಳಿಸಿದರು. ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿಗಿಂತ ಹೆಚ್ಚು ಅರ್ಧಶತಕಗಳನ್ನು ಬಾರಿಸಿರುವ ಆಟಗಾರ ಡೇವಿಡ್ ವಾರ್ನರ್ (108) ಮಾತ್ರ.