ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ವಾಂತಿ ಬೇಧಿ : ಬೆಡ್ ಇಲ್ಲದೆ ಮಕ್ಕಳಿಗೆ ನೆಲದ ಮೇಲೆ ಚಿಕಿತ್ಸೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣ ಬಳಿಯ ಕಣಿವೆ ಪ್ರದೇಶದಲ್ಲಿರುವ ಮೊರಾರ್ಜಿ ವಸತಿ ಶಾಲೆಯ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಬೇಧಿಯಿಂದಾಗಿ ಅಸ್ವಸ್ಥಗೊಂಡು ಆಸ್ಪತ್ರೆಯ ಪಾಲಾಗಿದ್ದಾರೆ. ನಿನ್ನೆ ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುತ್ತಿದ್ದಾರೆ. ಇದು ಇಂದು ಮುಂಜಾನೆಯೂ ಮುಂದುವರೆದಿದೆ. ಸದ್ಯ ನಿತ್ರಾಣರಾದ ಮಕ್ಕಳಿಗೆ ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಪರ್ಯಾಸವೆಂದರೆ ಬೆಡ್ ಇಲ್ಲದೆ ಮಕ್ಕಳು ನೆಲದ ಮೇಲೆ ಮಲಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.