ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ 'ಗಂಭೀರ್'ನಿರ್ಧಾರ...‘ದಯವಿಟ್ಟು ರಾಜಕೀಯದಿಂದ ದೂರ ಮಾಡಿ’

ಹೊಸದಿಲ್ಲಿ : ಪೂರ್ವ ದೆಹಲಿಯ ಬಿಜೆಪಿ ಸಂಸದರಾಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸಕ್ರಿಯ ರಾಜಕಾರಣದಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಗಂಬೀರ್,'ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ಜೆಪಿ ನಡ್ಡಾ ಅವರನ್ನು ವಿನಂತಿಸಿದ್ದೇನೆ. ಕ್ರಿಕೆಟ್‌ನತ್ತ ಮಾತ್ರ ಗಮನ ಹರಿಸುತ್ತೇನೆ. ಪ್ರಧಾನಿ ಮೋದಿ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜೈ ಹಿಂದ್ ಎಂದು ತಿಳಿಸಿದ್ದಾರೆ.
2019ರ ಮಾರ್ಚ್ ನಲ್ಲಿ ಬಿಜೆಪಿ ಸೇರಿ ರಾಜಕೀಯ ಪದಾರ್ಪಣೆ ಮಾಡಿದ್ದ ಗೌತಮ್, 2019ರ ಲೋಕಸಭೆ ಚುನಾವಣೆಯಲ್ಲಿ ಪೂರ್ವ ದೆಹಲಿಯಲ್ಲಿ ಸ್ಪರ್ಧೆ ಮಾಡಿದ್ದರು. ಚುನಾವಣೆಯಲ್ಲಿ ಅವರು ಬರೋಬ್ಬರಿ 6,95,109 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಮುಂಬರುವ 2024 ರ ಚುನಾವಣೆಗೆ ಗಂಭೀರ್ ಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳ ನಡುವೆ ರಾಜಕೀಯ ತ್ಯಜಿಸುವ ನಿರ್ಧಾರ ಬಂದಿದೆ.